Sign in
Sign in
Sign in
Select Language
011

Hud 11:18 ومن اظلم ممن افترى على الله كذبا اولايك يعرضون على ربهم ويقول الاشهاد هاولاء الذين كذبوا على ربهم الا لعنة الله على الظالمين ١٨

11:18
وَمَنۡ
أَظۡلَمُ
مِمَّنِ
ٱفۡتَرَىٰ
عَلَى
ٱللَّهِ
كَذِبًاۚ
أُوْلَٰٓئِكَ
يُعۡرَضُونَ
عَلَىٰ
رَبِّهِمۡ
وَيَقُولُ
ٱلۡأَشۡهَٰدُ
هَٰٓؤُلَآءِ
ٱلَّذِينَ
كَذَبُواْ
عَلَىٰ
رَبِّهِمۡۚ
أَلَا
لَعۡنَةُ
ٱللَّهِ
عَلَى
ٱلظَّٰلِمِينَ
١٨
ಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವನಿಗಿಂತಲೂ ದೊಡ್ಡ ಅಕ್ರಮಿ ಯಾರು? ಅವರನ್ನು ಅವರ ಪರಿಪಾಲಕನ (ಅಲ್ಲಾಹನ) ಮುಂದೆ ಹಾಜರುಪಡಿಸಲಾಗುವುದು. ಆಗ ಸಾಕ್ಷಿಗಳು ಹೇಳುವರು: “ಇವರೇ ತಮ್ಮ ಪರಿಪಾಲಕನ (ಅಲ್ಲಾಹನ) ಹೆಸರಲ್ಲಿ ಸುಳ್ಳು ಹೇಳಿದವರು.” ತಿಳಿಯಿರಿ! ಅಕ್ರಮಿಗಳ ಮೇಲೆ ಅಲ್ಲಾಹನ ಶಾಪವಿದೆ.
Continue Reading

Read Tafsir

Ibn Kathir (Abridged)

Those Who invent Lies against Allah and hinder Others from His Path are the Greatest Losers

Allah, the Exalted, explains the condition of those who lie against Him and that their scandal in the Hereafter will be presented before the heads of creation (for testimony) from the angels, Messengers, Proph

…

Those Who invent Lies against Allah and hinder Others from His Path are the Greatest Losers

Allah, the Exalted, explains the condition of those who lie

…
More Tafsirs

Read in Context

Chapter 11, Page 223, Juz 12

15. ಯಾರು ಇಹಲೋಕ ಜೀವನವನ್ನು ಮತ್ತು ಅದರ ಸೌಂದರ್ಯವನ್ನು ಬಯಸುತ್ತಾರೋ ಅವರಿಗೆ ನಾವು ಅವರ ಕರ್ಮಗಳ ಪ್ರತಿಫಲವನ್ನು ಇಹಲೋಕದಲ್ಲೇ ಪೂರ್ಣವಾಗಿ ನೀಡುವೆವು. ಇಲ್ಲಿ ಅವರಿಗೆ ಏನೂ ಕಡಿಮೆಯಾಗುವುದಿಲ್ಲ. 16. ಅವರಿಗೆ ಪರಲೋಕದಲ್ಲಿ ನರಕಾಗ್ನಿಯಲ್ಲದೆ ಬೇರೇನೂ ಇಲ್ಲ. ಇಹಲೋಕದಲ್ಲಿ ಅವರು ಮಾಡಿದ ಕರ್ಮಗಳೆಲ್ಲವೂ ವ್ಯರ್ಥವಾಗುವುವು. ಅವರು ಮಾಡುತ್ತಿದ್ದ ಕರ್ಮಗಳೆಲ್ಲವೂ ನಿಷ್ಪ್ರಯೋಜಕವಾಗುವುವು. 17. ಒಬ್ಬ ವ್ಯಕ್ತಿ ತನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಸ್ಪಷ್ಟ ಪುರಾವೆಯ ಆಧಾರದಲ್ಲಿದ್ದಾನೆ. ಅದರ ಹಿಂದೆ ಇನ್ನೊಂದು ಸಾಕ್ಷಿಯಿದೆ. ಇದಕ್ಕೆ ಮೊದಲು ಮಾರ್ಗದರ್ಶಿ ಮತ್ತು ದಯೆಯಾಗಿದ್ದ ಮೂಸಾರ ಗ್ರಂಥವು ಕೂಡ ಆ ಸಾಕ್ಷಿಯನ್ನು ಬೆಂಬಲಿಸುತ್ತದೆ. ಅವರು ಅದರಲ್ಲಿ ವಿಶ್ವಾಸವಿಡುತ್ತಾರೆ. ವಿವಿಧ ಪಂಗಡಗಳಲ್ಲಿ ಯಾರು ಅದನ್ನು ನಿಷೇಧಿಸುತ್ತಾರೋ ಅವರಿಗೆ ವಾಗ್ದಾನ ಮಾಡಲಾದ ಸ್ಥಳವು ನರಕಾಗ್ನಿಯಾಗಿದೆ. ಆದ್ದರಿಂದ ನೀವು ಅದರ (ಕುರ್‌ಆನ್‌ನ) ಬಗ್ಗೆ ಯಾವುದೇ ಸಂಶಯವನ್ನಿಟ್ಟುಕೊಳ್ಳಬೇಡಿ. ನಿಶ್ಚಯವಾಗಿಯೂ ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ವಿಶ್ವಾಸವಿಡುವುದಿಲ್ಲ. 18. ಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವನಿಗಿಂತಲೂ ದೊಡ್ಡ ಅಕ್ರಮಿ ಯಾರು? ಅವರನ್ನು ಅವರ ಪರಿಪಾಲಕನ (ಅಲ್ಲಾಹನ) ಮುಂದೆ ಹಾಜರುಪಡಿಸಲಾಗುವುದು. ಆಗ ಸಾಕ್ಷಿಗಳು ಹೇಳುವರು: “ಇವರೇ ತಮ್ಮ ಪರಿಪಾಲಕನ (ಅಲ್ಲಾಹನ) ಹೆಸರಲ್ಲಿ ಸುಳ್ಳು ಹೇಳಿದವರು.” ತಿಳಿಯಿರಿ! ಅಕ್ರಮಿಗಳ ಮೇಲೆ ಅಲ್ಲಾಹನ ಶಾಪವಿದೆ. 19. ಅವರು ಯಾರೆಂದರೆ, ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುವವರು ಮತ್ತು ಅದರಲ್ಲಿ ವಕ್ರತೆಯನ್ನು ಹುಡುಕುವವರು. ಅವರು ಪರಲೋಕವನ್ನು ನಿಷೇಧಿಸಿದವರಾಗಿದ್ದಾರೆ. 20. ಇವರಿಗೆ ಭೂಮಿಯಲ್ಲಿ (ಅಲ್ಲಾಹನನ್ನು) ಸೋಲಿಸಲು ಸಾಧ್ಯವಿಲ್ಲ. ಅಲ್ಲಾಹನ ಹೊರತು ಅವರಿಗೆ ಬೇರೆ ರಕ್ಷಕರೂ ಇಲ್ಲ. ಅವರಿಗೆ ಇಮ್ಮಡಿ ಶಿಕ್ಷೆ ನೀಡಲಾಗುವುದು. ಇವರಿಗೆ ಕೇಳುವ ಶಕ್ತಿಯಿರಲಿಲ್ಲ ಮತ್ತು ಇವರು ನೋಡುತ್ತಲೂ ಇರಲಿಲ್ಲ. 21. ಅವರೇ ಸ್ವಯಂ ಅವರನ್ನೇ ನಾಶ-ನಷ್ಟಕ್ಕೆ ಗುರಿಯಾಗಿಸಿದವರು. ಅವರು ಆರೋಪಿಸುತ್ತಿದ್ದ ವಿಷಯಗಳೆಲ್ಲವೂ ಅವರಿಂದ ಮರೆಯಾಗಿ ಬಿಡುವುವು. 22. ನಿಸ್ಸಂದೇಹವಾಗಿಯೂ ಅವರೇ ಪರಲೋಕದಲ್ಲಿ ಅತಿಹೆಚ್ಚು ನಷ್ಟಹೊಂದಿದವರು. 23. ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು, ಸತ್ಕರ್ಮವೆಸಗಿದವರು ಮತ್ತು ತಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ವಿನಮ್ರರಾಗಿರುವವರು ಯಾರೋ—ಅವರೇ ಸ್ವರ್ಗವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. 24. ಈ ಎರಡು ಪಂಗಡಗಳ (ಸತ್ಯವಿಶ್ವಾಸಿಗಳು ಮತ್ತು ಸತ್ಯನಿಷೇಧಿಗಳ) ಉದಾಹರಣೆಯು ಕಣ್ಣು ಕಾಣದವನು ಮತ್ತು ಕಿವಿ ಕೇಳದವನು ಹಾಗೂ ಕಣ್ಣು ಕಾಣುವವನು ಮತ್ತು ಕಿವಿ ಕೇಳುವವನಂತೆ. ಇವರಿಬ್ಬರೂ ಸಮಾನರಾಗುವರೇ? ಆದರೂ ನೀವು ಉಪದೇಶವನ್ನು ಸ್ವೀಕರಿಸುವುದಿಲ್ಲವೇ?

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute